ಅಧಿಪತ್ರ ಸಿನಿಮಾವನ್ನು
ಚಯನ್ ಶೆಟ್ಟಿ ನಿರ್ದೇಶನ ಮಾಡಿದ್ದಾರೆ. ಬಿಗ್‌ಬಾಸ್ ಸೀಸನ್ 9ರ ವಿನ್ನರ್
ರೂಪೇಶ್ ಶೆಟ್ಟಿ ಈ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಗಿಚ್ಚಿ ಗಿಲಿಗಿಲಿ ಖ್ಯಾತಿಯ
ಜಾಹ್ನವಿ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ರಘು ಪಾಂಡೇಶ್ವರ್, ಪ್ರಕಾಶ್ ತುಮಿನಾಡ್, ದೀಪಕ್ ರೈ ಪಣಜೆ, ಪ್ರಶಾಂತ್ ಪಣಜೆ ಮುಂತಾದವರು ತಾರಾಗಣದಲ್ಲಿದ್ದಾರೆ. ಶ್ರೀಹರಿ ಶ್ರೇಷ್ಠಿ ಸತ್ರಸಾಲಿ ಸಂಗೀತ, ಶ್ರೀಕಾಂತ್ ಎಲ್ ಛಾಯಾಗ್ರಹಣ ಸಿನಿಮಾಗಿದೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಚಿತ್ರವಾಗಿದ್ದು, ಮಂಗಳೂರು ಹಾಗೂ ಉಡುಪಿ ಸುತ್ತಮುತ್ತ ಚಿತ್ರೀಕರಣ ಮಾಡಲಾಗಿದೆ.
ಬಿಡುಗಡೆ: ಅಧಿಪತ್ರ 2025ರ ಫೆಬ್ರವರಿ 7ರಂದು ರಾಜ್ಯಾದಂತ್ಯ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.