ಅಜ್ಞಾತವಾಸಿ ಸಿನಿಮಾವನ್ನು ಗುಳ್ಟು ಸಿನಿಮಾ ಖ್ಯಾತಿಯ ಜನಾರ್ಧನ್ ಚಿಕ್ಕಣ್ಣ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಸಿದ್ದು ಮೂಲಿಮನಿ, ಪಾವನಾ ಗೌಡ, ರವಿಶಂಕರ್ ಗೌಡ, ಶರತ್ ಲೋಹಿತಾಶ್ವ ಮುಂತಾದವರು ತಾರಾಗಣದಲ್ಲಿದ್ದಾರೆ. ಹೇಮಂತ್ ರಾವ್ ಚಿತ್ರವನ್ನು ನಿರ್ಮಿಸುತ್ತಿದ್ದು, ಚರಣ್ ರಾಜ್ ಸಂಗೀತ ನಿರ್ದೇಶನ ಮಾಡಿದ್ದಾರೆ.
ಕಥೆ: 1997ರಲ್ಲಿ ಮಲೆನಾಡಿನಲ್ಲಿ ನಡೆದ ಕೊಲೆಯೊಂದರ ಸುತ್ತ ಕಥೆ ಈ ಸಿನಿಮಾದ ಕಥೆ ಸಾಗಲಿದ್ದು, ರಂಗಾಯಣ ರಘು ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.
ಬಿಡುಗಡೆ: ಅಜ್ಞಾತವಾಸಿ ಸಿನಿಮಾ 2025ರ ಏಪ್ರಿಲ್ 11ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.