ಅಪಾಯವಿದೆ ಎಚ್ಚರಿಕೆ ಸಿನಿಮಾವನ್ನು ಅಭಿಜಿತ್ ತೀರ್ಥಹಳ್ಳಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಕಿರುತೆರೆ ನಟ ವಿಕಾಸ್ ಉತ್ತಯ್ಯ ನಾಯಕನಾಗಿ ಹಾಗೂ ರಾಧಾ ಭಗವತಿ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ರಾಘವ್ ಕೊಡಚಾದ್ರಿ, ಮಿಥನ್ ತೀರ್ಥಹಳ್ಳಿ, ಹರಿಣಿ ಶ್ರೀಕಾಂತ್, ಅಶ್ವಿನ್ ಹಾಸನ್, ನವ್ಯಾ ಪೂಜಾರಿ, ದೇವ್ ರಥಾವರ ಮುಂತಾದವರು ತಾರಾಗಣದಲ್ಲಿದ್ದಾರೆ. ಸುನಾದ್ ಗೌತಮ್ ಸಂಗೀತ & ಛಾಯಾಗ್ರಹಣ ಹಾಗೂ ಹರ್ಷಿತ್ ಪ್ರಭು ಸಂಕಲನ ಚಿತ್ರಕ್ಕಿದೆ. ವಿ ಜಿ ಮಂಜುನಾಥ್ ಹಾಗೂ ಪೂರ್ಣಿಮಾ ಈ ಸಿನಿಮಾವನ್ನು ಯಶಸ್ವಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಅಪಾಯವಿದೆ ಎಚ್ಚರಿಕೆ ಸಿನಿಮಾ 2025ರ ಫೆಬ್ರವರಿ 28ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.