ಅಪ್ಪಾ ಐ ಲವ್ ಯೂ ಸಿನಿಮಾವನ್ನು
ಅಥರ್ವ್ ಆರ್ಯ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಲವ್ಲಿಸ್ಟಾರ್
ಪ್ರೇಮ್ ನಾಯಕನಾಗಿ ಹಾಗೂ
ಮಾನ್ವಿತಾ ಕಾಮತ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ತಬಲಾ ನಾಣಿ,ಸಂಜಯ್, ಜೀವಿತಾ, ರಂಗಿತರಂಗ ಅರವಿಂದ್, ವಿಜಯ್ ಚೆಂಡೂರ್, ಬಲ ರಾಜ್ವಾಡಿ, ಮಿಮಿಕ್ರಿ ಗೋಪಿ, ಅರುಣ ಬಾಲರಾಜ್, ವರ್ಧನ್ ತೀರ್ಥಹಳ್ಳಿ, ಗಿರೀಶ್ ಜತ್ತಿ, ಪಟೇಲ್ ಅಣ್ಣಯ್ಯಪ್ಪ ಸೇರಿದಂತೆ ಹಲವರು ನಟಿಸಿದ್ದಾರೆ. ಆಕಾಶ್ ಪರ್ವ ಸಂಗೀತ ಹಾಗೂ ಆರ್ ಡಿ ನಾಗಾರ್ಜುನ್ ಛಾಯಾಗ್ರಹಣವಿದೆ.
ಈ ಸಿನಿಮಾದ ಅಪ್ಪ-ಮಗನ ಬಾಂಧವ್ಯ ಸಾರಿ ಹೇಳುವ ಮನೆಗೊಂದು ಮಾಳಿಗೆ ಹಾಡಿಗೆ ಕಿನ್ನಾಳ್ ರಾಜ್ ಸಾಹಿತ್ಯ ಬರೆದಿದ್ದು, ವಿಜಯ್ ಪ್ರಕಾಶ್ ಹಾಡಿದ್ದಾರೆ.
ಬಿಡುಗಡೆ: ಅಪ್ಪಾ ಐ ಲವ್ ಯೂ ಸಿನಿಮಾ 2024ರ ಏಪ್ರಿಲ್ 12ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.