ಬಾನ ದಾರಿಯಲ್ಲಿ ಪ್ರೀತಮ್ ಗುಬ್ಬಿ ನಿರ್ದೇಶನದಲ್ಲಿ ಮೂಡಿಬಂದಿರುವ ರೋಮ್ಯಾಂಟಿಕ್ ಡ್ರಾಮಾ ಸಿನಿಮಾ. ಚಿತ್ರದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕನಾಗಿ ನಟಿಸಿದ್ದು, ರುಕ್ಮಿಣಿ ವಸಂತ್ ಹಾಗೂ ರೀಷ್ಮಾ ನಾಣಯ್ಯ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಗಾಯಣ ರಘು ಸೇರಿದಂತೆ ಹಲವರು ಫೋಷಕ ಪಾತ್ರದಲ್ಲಿ ನಟಿಸಿದ್ದಾರೆ.
ಈ ಚಿತ್ರಕ್ಕೆ ವಿ ಹರಿಕೃಷ್ಣ ಸಂಗೀತ ಮತ್ತು ದೀಪು ಎಸ್ ಕುಮಾರ್ ಸಂಕಲನವಿದೆ. ಗಣೇಶ್ ಮತ್ತು ಪ್ರೀತಂ ಗುಬ್ಬಿ ನಾಲ್ಕನೇ ಬಾರಿಗೆ ಒಂದಾಗಿರುವ ಈ ಸಿನಿಮಾ ಸಾಕಷ್ಟು ನಿರೀಕ್ಷೆ ಮೂಡಿಸಿದೆ.
ಬಿಡುಗಡೆ: ಬಾನ ದಾರಿಯಲ್ಲಿ ಸಿನಿಮಾ ಸೆಪ್ಟಂಬರ್ 28ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.