ಬ್ಯಾಂಕ್ ಆಫ್ ಭಾಗ್ಯಲಕ್ಷ್ಮೀ ಸಿನಿಮಾವನ್ನು
ಅಭಿಷೇಕ್ ಎಂ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ
ದೀಕ್ಷಿತ್ ಶೆಟ್ಟಿ ನಾಯಕನಾಗಿ ಹಾಗೂ
ಬೃಂದಾ ಆಚಾರ್ಯ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಸಾಧು ಕೋಕಿಲ, ಉಷಾ ಭಂಡಾರಿ, ಗೋಪಾಲಕೃಷ್ಣ ದೇಶಪಾಂಡೆ, ಭರತ್, ಹರೀಶ್ ಸಮಷ್ಟಿ, ವಿಶ್ವನಾಥ್, ಅಶ್ವಿನ್ ರಾವ್ ಪಲ್ಲಕ್ಕಿ, ಶ್ರೀವತ್ಸ, ವಿನುತ್, ಶ್ರೇಯಸ್ ಶರ್ಮಾ ಮುಂತಾದವರು ತಾರಾಗಣದಲ್ಲಿದ್ದಾರೆ.
ಜ್ಯೂಡಾ ಸ್ಯಾಂಡಿ ಸಂಗೀತ ಹಾಗೂ ಅಭಿಷೇಕ್ ಜಿ ಕಾಸರಗೋಡು ಛಾಯಾಗ್ರಹಣ ಸಿನಿಮಾಗಿದೆ. ಚಿತ್ರಕ್ಕೆ
ಹೆಚ್.ಕೆ. ಪ್ರಕಾಶ್ ಅವರು ಬಂಡವಾಳ ಹೂಡಿದ್ದಾರೆ.
ಚಿತ್ರದ ಶೀರ್ಷಿಕೆಯೇ ಸೂಚಿಸುತ್ತಿರುವಂತೆ ಬ್ಯಾಂಕ್ವೊಂದರಲ್ಲಿ ದರೋಡೆ ಮಾಡಲು ಹೊರಟವರ ಕಹಾನಿ ಈ ಸಿನಿಮಾದಲ್ಲಿ ಇರಲಿದೆ. ಈ ಕಥೆಯನ್ನು ಹಾಸ್ಯ ಪ್ರಧಾನವಾಗಿ ತೆರೆಗೆ ತರಲಾಗುತ್ತಿದೆ.ಕನ್ನಡ ಮಾತ್ರವಲ್ಲದೇ, ತೆಲುಗಿನಲ್ಲೂ ಬಿಡುಗಡೆ ಮಾಡಲು ನಿರ್ಮಾಪಕರು ನಿರ್ಧರಿಸಿದ್ದಾರೆ.