ಬೇಗೂರು ಕಾಲೋನಿ ಸಿನಿಮಾವನ್ನು ಫ್ಲೈಯಿಂಗ್ ಕಿಂಗ್ ಮಂಜು ನಿರ್ದೇಶಿಸಿ, ನಟಿಸಿದ್ದಾರೆ. ಚಿತ್ರದಲ್ಲಿ ಬಿಗ್‌ಬಾಸ್ ಖ್ಯಾತಿಯ ರಾಜೀವ್ ಹನು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ತೆಲುಗು ನಟ ಪೊಸಾನಿ ಕೃಷ್ಣ ಮುರಳಿ, ಕೀರ್ತಿ ಭಂಡಾರಿ, ಪಲ್ಲವಿ ಪರ್ವ, ಬಲ ರಾಜ್ವಾಡಿ ತಾರಾಗಣದಲ್ಲಿದ್ದಾರೆ. ಕಾರ್ತಿಕ್ ಛಾಯಾಗ್ರಹಣ, ಅಭಿನಂದನ್ ಕಶ್ಯಪ್ ಸಂಗೀತ ಸಿನಿಮಾದಲ್ಲಿದೆ. ಶ್ರೀಮಾ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಈ ಚಿತ್ರವನ್ನು ಶ್ರೀನಿವಾಸ್ ಬಾಬು ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ದಕ್ಷಿಣ ಭಾಗದ ಬೇಗೂರಿಗೆ ನೂರಾರು ವರ್ಷಗಳ ಇತಿಹಾಸವಿದೆ. ಇದೇ ಭಾಗದ ಒಂದು ಕಾಲೋನಿ ಕಥೆಯನ್ನು ಸಿನಿಮಾದಲ್ಲಿ ಹೇಳಲಾಗುತ್ತಿದೆ.