ಭೈರಾದೇವಿ ಸಿನಿಮಾವನ್ನು ಶ್ರೀಜೈ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಾಧಿಕಾ ಕುಮಾರಸ್ವಾಮಿ, ರಮೇಶ್ ಅರವಿಂದ್ ಹಾಗೂ ಅನು ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಉಳಿದಂತೆ ರವಿಶಂಕರ್, ರಂಗಾಯಣ ರಘು, ಸ್ಕಂದ ಅಶೋಕ್, ಸುಚೇಂದ್ರ ಪ್ರಸಾದ್, ಪದ್ಮಜಾ ರಾವ್, ಮಾಳವಿಕ ಅವಿನಾಶ್ ಸೇರಿದಂತೆ ದೊಡ್ಡ ತಾರಾಗಣ ಸಿನಿಮಾದಲ್ಲಿದೆ. ಜೆ.ಎಸ್.ವಾಲಿ ಛಾಯಾಗ್ರಹಣ, ಕೆ.ಕೆ.ಸೆಂಥಿಲ್ ಪ್ರಸಾದ್ ಸಂಗೀತ ನಿರ್ದೇಶನ ಹಾಗೂ ರವಿಚಂದ್ರನ್ ಸಂಕಲನ ಚಿತ್ರಕ್ಕಿದೆ. ಶಮಿಕಾ ಎಂಟರ್‌ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಭೈರಾದೇವಿ ಸಿನಿಮಾವನ್ನು ರಾಧಿಕಾ ಕುಮಾರಸ್ವಾಮಿ, ಯಾದವ್ ಹಾಗೂ ರವಿರಾಜ್ ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಭೈರಾದೇವಿ ಸಿನಿಮಾ 2024ರ ಅಕ್ಟೋಬರ್ 3ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.