ಬನ್ ಟೀ ಸಿನಿಮಾವನ್ನು ಉದಯ್ ಕುಮಾರ್ ಪಿ ಎಸ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಉಮೇಶ್ ಸಕ್ಕರೆನಾಡ್, ಶ್ರೀದೇವಿ ಜೆ ಇ, ಮೌರ್ಯ ಕುಮರ್ ಗೌಡ ಮುಂತಾದವರು ನಟಿಸಿದ್ದಾರೆ. ನಿರ್ದೇಶಕ ಉದಯ್ ತಮ್ಮ ಸ್ನೇಹಿತನ ಜೀವನದಲ್ಲಿ ನಡೆದ ಕಥೆಯನ್ನೇ ಸಿನಿಮಾ ಮಾಡಿದ್ದು, ಇತ್ತೀಚಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರ ಹೇಗೆ ಬದಲಾಗಿದೆ ಎಂಬುದನ್ನು ತೋರಿಸಲಾಗಿದೆ. ಕೇಶವ್ ಈ ಚಿತ್ರವನ್ನು ನಿರ್ಮಿಸಿದ್ದಾರೆ.