ಬರ್ಮ ಸಿನಿಮಾವನ್ನು ಚೇತನ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಇದೊಂದು ಆಕ್ಷನ್ ಎಂಟರ್‌ಟೈನರ್ ಸಿನಿಮಾವಾಗಿದ್ದು, ಗಟ್ಟಿಮೇಳ ಸೀರಿಯಲ್ ಖ್ಯಾತಿಯ ನಟ ರಕ್ಷ್ ನಾಯಕನಾಗಿ ನಟಿಸುತ್ತಿದ್ದಾರೆ. ಬರ್ಮ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಬಹದ್ದೂರ್ ಹಾಗೂ ಭರ್ಜರಿ ಸಿನಿಮಾದಲ್ಲಿ ಚೇತನ್ ಕುಮಾರ್ ಹಾಗೂ ಹರಿಕೃಷ್ಣ ಒಟ್ಟಿಗೆ ಕೆಲಸ ಮಾಡಿದ್ದರು. ಈಗ 'ಬರ್ಮಾ' ಮೂಲಕ ಮೂರನೇ ಬಾರಿ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಅದಕ್ಕೆ ಸಿನಿಮಾ ಸೆಟ್ಟೇರುವ ಮೊದಲೇ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಡಿ ಬೀಟ್ಸ್‌ಗೆ ಸೇಲ್ ಆಗಿದೆ ಎಂದು ಹೇಳಲಾಗುತ್ತಿದೆ. ಸೆಪ್ಟಂಬರ್ ತಿಂಗಳಿನಿಂದ ಸಿನಿಮಾದ ಶೂಟಿಂಗ್ ಆರಂಭವಾಗಲಿದೆ.
ಫ್ಯಾನ್ ಇಂಡಿಯಾ: ಬರ್ಮ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.