ಕ್ಯಾಡ್ಬರಿಸ್ ಸಿನಿಮಾವನ್ನು ರಮೇಶ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದಲ್ಲಿ ಧರ್ಮ ಕೀರ್ತಿರಾಜ್ ನಾಯಕನಾಗಿ ಹಾಗೂ ಅದ್ವಿತಿ ಶೆಟ್ಟಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಜೊತೆಗೆ ಬಿಗ್‌ಬಾಸ್ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಡಾ.ಶಿವರಾಜ್ ಜಾಣಗೆರೆ ಅವರು ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ಸಂಗೀತ ಸಂಯೋಜನೆ ಮಾಡಿದ್ದಾರೆ. ಚಿತ್ರಕ್ಕೆ ಶರತ್ ಕುಮಾರ್ ಎಂಬುವವರು ಛಾಯಗ್ರಹಣ ಮಾಡಿದ್ದು, ಕನಸು ಪ್ರೊಡಕ್ಷನ್ಸ್ ಅಡಿಯಲ್ಲಿ ಚಿತ್ರ ಮೂಡಿಬರಲಿದೆ.