ಡಿ59 ಸಿನಿಮಾವನ್ನು ತರುಣ್ ಸುಧೀರ್ ನಿರ್ದೇಶನ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರಾದ ವೀರ ಸಿಂಧೂರ ಲಕ್ಷ್ಮಣ ಅವರ ಜೀವನನ್ನಾಧರಿಸಿ ಸಿನಿಮಾ ಇದಾಗಿದೆ. ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕ್ರಾಂತಿ ಪುರುಷ ವೀರ ಸಿಂಧೂರ ಲಕ್ಷ್ಮಣನಾಗಿ ಕಾಣಿಸಿಕೊಳ್ಳಲಿದ್ದಾರೆ. ಯಜಮಾನ ಮತ್ತು ಕ್ರಾಂತಿಯಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಶೈಲಜಾ ನಾಗ್ ಮತ್ತು ಬಿ. ಸುರೇಶ್ ಇದೇ ಮೊದಲ ಬಾರಿಗೆ ಐತಿಹಾಸಿಕ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ವಿ.ಹರಿಕೃಷ್ಣ ಸಂಗೀತ ನಿರ್ದೇಶನ ಇರಲಿದೆ.