ದಾಸಪ್ಪ ಸಿನಿಮಾವನ್ನು ವಿಜಯ್ ಕೀಲಾರ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ತಿಥಿ ಸಿನಿಮಾ ಖ್ಯಾತಿಯ ತಮ್ಮಣ್ಣ 'ದಾಸಪ್ಪ'ನಾಗಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಮಂಜು ಪಾವಗಡ, ವಿನೋದ್ ಗೊಬ್ರಗಾಲ, ಅಂಜನ ಗಿರೀಶ್, ಸುರಕ್ಷಿತ ಶೆಟ್ಟಿ, ಸಿಂಚನ ಗೌಡ ಮುಂತಾದವರು ತಾರಾಗಣದಲ್ಲಿದ್ದಾರೆ. ಕೌಶಿಕ್ ನಾರಾಯಣ್ ವಿ ಸಂಗೀತ ಹಾಗೂ ರಾಜೇಶ್ ಗೌಡ ಆರ್ ಛಾಯಾಗ್ರಹಣ ಸಿನಿಮಾಗಿದೆ. ಹಾಡುಗಳು ಹಾಗೂ ಸಾಹಸ ಸನ್ನಿವೇಶಗಳು ಇಲ್ಲದಿರುವುದು ಈ ಚಿತ್ರದ ವಿಶೇಷ.