ದಿಲ್ ಖುಷ್ ಸಿನಿಮಾವನ್ನು
ಪ್ರಮೋದ್ ಜಯ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ
ರಂಜಿತ್ ದೇವ್ ನಾಯಕನಾಗಿ ಹಾಗೂ
ಸ್ಪಂದನಾ ಸೋಮಣ್ಣ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ
ರಂಗಾಯಣ ರಘು, ಧರ್ಮಣ್ಣ ಕಡೂರ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ರವಿ ಭಟ್ ಮುಂತಾದವರು ತಾರಾಗಣದಲ್ಲಿದ್ದಾರೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ನಿವಾಸ್ ನಾರಾಯಣ್ ಛಾಯಾಗ್ರಹಣ ಸಿನಿಮಾಗಿದೆ. ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಪ್ರವೀಣ್ ಹಾಗೂ ಪ್ರಭ ಶೇಖರ್ 'ದಿಲ್ ಖುಷ್' ಚಿತ್ರ ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ದಿಲ್ ಖುಷ್ ಸಿನಿಮಾ 2024ರ ಮಾರ್ಚ್ 22ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ.