ಎಲೆಕ್ಟ್ರಾನಿಕ್ ಸಿಟಿ ಸಿನಿಮಾವನ್ನು ಚಿಕ್ಕಣ್ಣ ರಾಮಕೃಷ್ಣಯ್ಯ ನಿರ್ದೇಶಿಸಿ, ನಿರ್ಮಿಸಿದ್ದಾರೆ. ಸಿನಿಮಾದಲ್ಲಿ ಆರ್ಯನ್ ಹರ್ಷ ನಾಯಕನಾಗಿ ನಟಿಸಿದ್ದು, ದಿಯಾ ಆಶ್ಲೇಶ ಹಾಗೂ ರಕ್ಷಿತಾ ಕೆರೆಮನೆ ನಾಯಕಿಯಾಗಿ ನಟಿಸಿದ್ದಾರೆ. ವಿನು ಮನಸು ಸಂಗೀತ ಮತ್ತು ರಾಜಾ ಶಿವಶಂಕರ್ ಛಾಯಾಗ್ರಹಣ ಸಿನಿಮಾಗಿದೆ.
ಈಗಿನ ಬಹುತೇಕ ಎಲ್ಲ ಯುವಕ-ಯುವತಿಯರು ಐಟಿ ಉದ್ಯೋಗಿಗಳಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಸದಾ ಒತ್ತಡದಲ್ಲಿರುತ್ತಾರೆ. ಅಂತಹ ಉದ್ಯೋಗಿಯ ವರ್ಕ್ ಲೈಫ್ ಹೇಗಿರುತ್ತೆ ಎನ್ನುವ ಅಂಶವನ್ನೇ ಇಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ. ಜೊತೆಗೆ ತ್ರಿಕೋನ ಪ್ರೇಮಕಥೆಯೂ ಸಿನಿಮಾದಲ್ಲಿದೆ.