ಎಲ್ಲಿಗೆ ಪಯಣ ಯಾವುದೋ ದಾರಿ ಸಿನಿಮಾವನ್ನು ಕಿರಣ್ ಎಸ್ ಸೂರ್ಯ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಅಭಿಮಾನ್ಯು ಕಾಶಿನಾಥ್ ನಾಯಕನಾಗಿ ಹಾಗೂ ಸ್ಫೂರ್ತಿ ಉಡಿಮನೆ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಬಾಲ ರಾಜ್ವಾಡಿ, ಶೋಭನ್, ಅಯಾಂಕ್, ರಿನಿ ಬೋಪಣ್ಣ, ಪ್ರದೀಪ್, ರವಿತೇಜ, ಕಿಶೋರ್, ಅಶ್ವಿನ್ ರಾವ್ ಮುಂತಾದವರು ತಾರಾಗಣದಲ್ಲಿದ್ದಾರೆ. ಈ ಚಿತ್ರವನ್ನು ಜತಿನ್ ಪಟೇಲ್ ಸುದರ್ಶನ್ ಆಟ್ರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.
ಬಿಡುಗಡೆ: ಎಲ್ಲಿಗೆ ಪಯಣ ಯಾವುದೋ ದಾರಿ ಸಿನಿಮಾ 2024ರ ಅಕ್ಟೋಬರ್ 25ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ.