ಗೌರಿ ಸಿನಿಮಾವನ್ನು
ಇಂದ್ರಜಿತ್ ಲಂಕೇಶ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಇಂದ್ರಜಿತ್ ಅವರ ಪುತ್ರ
ಸಮರ್ಜಿತ್ ಲಂಕೇಶ್ ನಾಯಕನಾಗಿ ನಟಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ.
ಸಾನ್ಯಾ ಅಯ್ಯರ್ ಚಿತ್ರದ ನಾಯಕಿ. ಉಳಿದಂತೆ ಪ್ರಿಯಾಂಕಾ ಉಪೇಂದ್ರ, ಲೂಸ್ ಮಾದ ಯೋಗಿ, ಅಕುಲ್ ಬಾಲಾಜಿ, ಮಾನಸಿ ಸುಧೀರ್, ಗೋಪಾಲಕೃಷ್ಣ ದೇಶಪಾಂಡೆ, ಸಂಪತ್ ಮೇತ್ರಿಯಾ ಮಂತಾದವರು ತಾರಾಗಣದಲ್ಲಿದ್ದಾರೆ.
ಚಿತ್ರಕ್ಕೆ ಜೆಸ್ಸಿ ಗಿಫ್ಟ್, ಚಂದನ್ ಶೆಟ್ಟಿ, ಶಿವು ಬೆರಗಿ, ಅನಿರುದ್ಧ್ ಶಾಸ್ತ್ರಿ ಸಂಗೀತ ಹಾಗೂ ಎ.ವಿ ಕೃಷ್ಣಕುಮಾರ್ ಛಾಯಾಗ್ರಹಣವಿದೆ. ಲಾಫಿಂಗ್ ಬುದ್ಧ ಬ್ಯಾನರ್ ಅಡಿಯಲ್ಲಿ ಇಂದ್ರಜಿತ್ ಲಂಕೇಶ್ ಅವರೇ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ; ಗೌರಿ ಸಿನಿಮಾ 2024ರ ಆಗಸ್ಟ್ 15ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.