ಹದಿನೇಳೆಂಟು ಸಿನಿಮಾವನ್ನು ಪೃಥ್ವಿ ಕೋಣನೂರು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಶೆರ್ಲಿನ್ ಭೋಸಲೆ ನಾಯಕಿಯಾಗಿ ಹಾಗೂ ನೀರಜ್ ಮ್ಯಾಥ್ಯೂ ನಾಯಕನಾಗಿ ಅಬಿನಯಿಸಿದ್ದಾರೆ. ಉಳಿದಂತೆ ಸುಧಾ ಬೆಳವಾಡಿ, ನಾಗೇಂದ್ರ ಶಾ, ರೇಖಾ ಕೂಡ್ಲಿಗಿ, ಭವಾನಿ ಪ್ರಕಾಶ್, ರವಿ ಹೆಬ್ಬಳ್ಳಿ, ಲಕ್ಷ್ಮೀ ಮೂರ್ತಿ ಮುಂತಾದವರು ಫೋಷಕ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಹದಿನೇಳೆಂಟು ಕಾಲೇಜಿನಲ್ಲಿ ನಡೆಯುವ ಕಥೆಯಾಗಿದ್ದು, ವಿಡಿಯೋ ವೈರಲ್ ಆಗಿ ಅದರ ಸುತ್ತ ನಡೆಯುವ ಕಥೆಗಳನ್ನು ಆಧರಿಸಿದೆ.
ಹದಿನೇಳೆಂಟು ಸಿನಿಮಾ ಬುಸಾನ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ, MAMI, ಹಾಂಗ್ ಕಾಂಗ್ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ, ಕೋಲ್ಕತ್ತಾ ಅಂತರಾಷ್ಟ್ರೀಯ ಚಲನಚಿತ್ರೋತ್ಸವ, ಕೇರಳದ ಅಂತರಾಷ್ಟ್ರೀಯ ಚಲನಚಿತ್ರೋತ್ಸವ, TIFF ಕಿಡ್ಸ್, Zlin ಚಲನಚಿತ್ರೋತ್ಸವ, ಮೆಲ್ಬೋರ್ನ್ ಫಿಲ್ಮ್ ಫೆಸ್ಟಿವಲ್, IFFI ಗೋವಾ, ಪ್ರೇಗ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ, ನ್ಯೂಯಾರ್ಕ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್, ಒಟ್ಟಾವ ಇಂಡಿಯನ್ ಫಿಲ್ಮ್ ಫೆಸ್ಟಿವಲ್ ಮುಂತಾದ ಹಲವು ಪ್ರತಿಷ್ಠಿತ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ 50ಕ್ಕೂ ಹೆಚ್ಚು ಪ್ರಶಸ್ತಿಗಳಿಗೆ ನಾಮ ನಿರ್ದೇಶನಗೊಂಡು 24ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಪಡೆದುಕೊಂಡಿದೆ.