ಹನುಮಾನ್ ಸಿನಿಮಾವನ್ನು ಪ್ರಶಾಂತ್ ವರ್ಮಾ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ತೇಜ್ ಸಜ್ಜಾ ನಾಯಕನಾಗಿ ಹಾಗೂ ಅಮೃತಾ ಅಯ್ಯರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ವರಲಕ್ಷಿ ಶರತ್ ಕುಮಾರ್, ವಿನಯ್ ರೈ, ರಾಜ್ ದೀಪಕ್ ಶೆಟ್ಟಿ, ಗೆಟಪ್ ಶ್ರೀನು, ಸತ್ಯ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ನಿರಂಜನ್ ರೆಡ್ಡಿ ನಿರ್ಮಾಣ ಮಾಡಿದ್ದಾರೆ.
ಇದು ಹನುಮಾನ್ ದೇವರ ಬಗ್ಗೆ ಇರುವ ಸಿನಿಮಾವಲ್ಲ. ಒಂದು ಹುಡುಗನಿಗೆ ಹನುಮಾನ್ ಪವರ್ ಬಂದಾಗ ಏನಾಗುತ್ತದೆ ಅನ್ನೋದು ಸಿನಿಮಾ. ಈ ಚಿತ್ರದಲ್ಲಿ ಕಾಮಿಡಿ , ಆಕ್ಷನ್ , ಪ್ರೀತಿ ಎಲ್ಲವೂ ಇದೆ. ಹನುಮಾನ್ ಸಿನಿಮಾವನ್ನು ಕನ್ನಡದಲ್ಲಿ ಕೆಆರ್‌ಜಿ ರಿಲೀಸ್ ಮಾಡುತ್ತಿದೆ.
ಬಿಡುಗಡೆ: ಹನುಮಾನ್ ಸಿನಿಮಾ 2024ರ ಜನವರಿ 12ರಂದು ತೆಲುಗು, ಕನ್ನಡ, ಮರಾಠಿ, ತಮಿಳು, ಮಲಯಾಳಂ, ಚೈನೀಸ್ ಸೇರಿದಂತೆ ಹಲವು ಭಾಷೆಗಳಲ್ಲಿ ಈ ಸಿನಿಮಾ ತೆರೆಗೆ ಬರುತ್ತಿದೆ.