ಹಿರಣ್ಯ ಸಿನಿಮಾವನ್ನು ಪ್ರವೀಣ್ ಅವ್ಯುಕ್ತ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಮೂಲಕ ಡಿಂಗ್ರಿ ನಾಗರಾಜ್ ಪುತ್ರ ರಾಜವರ್ಧನ್ ನಾಯಕನಾಗಿ ಸ್ಯಾಂಡಲ್‌ವುಡ್ ಪ್ರವೇಶಿಸಿದ್ದಾರೆ. ರಾಜವರ್ಧನ್‌ಗೆ ಜೋಡಿಯಾಗಿ ಮಾಡೆಲ್ ರಿಹಾನಾ ನಟಿಸಿದ್ದು, ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಹುಲಿ ಕಾರ್ತಿಕ್, ಅರವಿಂದ್ ರಾವ್, ದಿಲೀಪ್ ಶೆಟ್ಟಿ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ.
ಯೋಗೇಶ್ವರನ್ ಆರ್ ಛಾಯಾಗ್ರಹಣ ಹಾಗೂ ಜ್ಯೂಡಾ ಸ್ಯಾಂಡಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ವಿಘ್ನೇಶ್ವರ ಹಾಗೂ ವಿಜಯ್ ಕುಮಾರ್ ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಇದೊಂದು ಕಂಪ್ಲೀಟ್ ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ತಾಯಿ ಸೆಂಟಿಮೆಂಟ್ ಕೂಡ ಇದೆ.