'ಹೊಂದಿಸಿ ಬರೆಯಿರಿ'ಸಿನಿಮಾವನ್ನು ರಾಮೇನಹಳ್ಳಿ ಜಗನ್ನಾಥ್ ನಿರ್ದೇಶನ ಮಾಡಿದ್ದಾರೆ. ಬಹುದೊಡ್ಡ ತಾರಾಗಣ ಚಿತ್ರದಲ್ಲಿದ್ದು, ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀ ಮಹದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಶಾಂತಿ ಸಾಗರ್ ಹೆಚ್.ಜಿ ಕ್ಯಾಮೆರಾ ನಿರ್ದೇಶನ, ಜೋ ಕೋಸ್ಟ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್ ಮೂವರ ಸಂಭಾಷಣೆ ಚಿತ್ರಕ್ಕಿದೆ. ಸಂಡೇ ಸಿನಿಮಾಸ್ ಬ್ಯಾನರ್ ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದಾರೆ.
ಕಥೆ
ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ 'ಹೊಂದಿಸಿ ಬರೆಯಿರಿ' ಸಿನಿಮಾ. ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ. ಈಗಾಗಲೇ ಚಿತ್ರದ ಸ್ಯಾಂಪಲ್ ಗಳ ಮೂಲಕ ಗಮನ ಸೆಳೆದಿರುವ ಈ ಚಿತ್ರ ಸಿನಿರಸಿಕರಲ್ಲಿ ನಿರೀಕ್ಷೆಯನ್ನು ಹೆಚ್ಚಿಸಿದೆ.