ಸ್ಯಾಂಡಲ್‌ವುಡ್‌ನಲ್ಲಿ ತಮ್ಮದೆ ವಿಭಿನ್ನ ಸಿನಿಮಾ ಶೈಲಿಯ ಮೂಲಕವೇ ಗುರುತಿಸಿಕೊಂಡಿರುವ ನಿರ್ದೇಶಕ ಶ್ರೀನಿವಾಸರಾಜು 'ಹುಬ್ಬಳ್ಳಿ ಡಾಬಾ' ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈಗಾಗಲೇ ನನ್ನವನು, ಕೋಟೆ, ದಂಡುಪಾಳ್ಯ, ಶಿವ ಮುಂತಾದ ಚಿತ್ರಗಳನ್ನು ಶ್ರೀನಿವಾಸರಾಜು ನಿರ್ದೇಶಿಸಿದ್ದಾರೆ. 'ಹುಬ್ಬಳ್ಳಿ ಡಾಬಾ' ಚಿತ್ರ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆರಂಭವಾಗಿತ್ತು. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಕನ್ನಡ ಹಾಗೂ ತೆಲುಗು ಭಾಷೆಗಳಲ್ಲಿ ತಯಾರಾಗಿದೆ.
ಈ ಚಿತ್ರದಲ್ಲಿ ತೆಲುಗಿನ ನವೀನ್ ಚಂದ್ರ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ದಿವ್ಯ ಪಿಳ್ಳೈ, ಅನನ್ಯ ಸೇನ್ , ರವಿಶಂಕರ್, ರಾಜಾ ರವೀಂದ್ರ, ನಾಗಾ ಬಾಬು, ಅಯ್ಯಪ್ಪ ಶರ್ಮ, ಪೂಜಾ ಗಾಂಧಿ, ರವಿಕಾಳೆ, ಮಕರಂದ ದೇಶಪಾಂಡೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.