ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅಭಿನಯದ ಮೊದಲ ಪ್ಯಾನ್ ಇಂಡಿಯಾ ಸಿನಿಮಾ ಜಠಾರ. ಪ್ರೇಮಕಥೆಯುಳ್ಳ ಈ ಚಿತ್ರವನ್ನು ತೆಲುಗು ನಿರ್ದೇಶಕ ಉದಯ್ ನಂದನವನಂ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರದ ಶೂಟಿಂಗ್ ಆಗಸ್ಟ್ ತಿಂಗಳಲ್ಲಿ ಆರಂಭವಾಗಲಿದ್ದು, 2024ರ ಸಂಕ್ರಾಂತಿಗೆ ಸಿನಿಮಾ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಚಿತ್ರವನ್ನು ಗೋವರ್ಧನ್ ರೆಡ್ಡಿ ವರ್ಧಮಾನ್ ಮತ್ತು ಲೋಟಸ್ ಎಂಟಟೈಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡುತ್ತಿದ್ದಾರೆ.
ಪ್ಯಾನ್ ಇಂಡಿಯಾ: ಜಠಾರ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.