ರಾಧಾಕೃಷ್ಣ ರೆಡ್ಡಿ ನಿರ್ದೇಶನದ ಜೂನಿಯರ್ ಸಿನಿಮಾದಲ್ಲಿ ರಾಜಕಾರಣಿ ಜನಾರ್ಧನ್ ರೆಡ್ಡಿಯವರ ಪುತ್ರ ಕಿರೀಟಿ ರೆಡ್ಡಿ ನಾಯಕನಾಗಿ ನಟಿಸುತ್ತಿದ್ದಾರೆ. ಈ ಚಿತ್ರದಲ್ಲಿ ಶ್ರೀಲೀಲಾ ನಾಯಕಿಯಾಗಿ ನಟಿಸಿದ್ದು, ರವಿಚಂದ್ರನ್, ಖುಷ್ಬೂ ಮತ್ತು ಜೆನಿಲಿಯಾ ದೇಶಮುಖ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೀತಂ ಗುಬ್ಬಿ ನಿದೇಶನದ ಹಾಗೆ ಸುಮ್ಮನೆ ಸಿನಿಮಾದ ಕಿರಣ್ ಶ್ರೀನಿವಾಸ್ ಈ ಸಿನಿಮಾದಲ್ಲಿ ವಿಲನ್ ಆಗಿ ಕಾಣಿಸಿಕೊಳ್ಳಲಿದ್ದಾರೆ.
ಸಾಯಿ ಕೊರಪಾಟಿಯವರ ವಾರಾಹಿ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಸಿನಿಮಾಗೆ ಬಾಹುಬಲಿ ಖ್ಯಾತಿಯ ಸೆಂಥಿಲ್ ಕುಮಾರ್ ಛಾಯಾಗ್ರಹಣ ಮಾಡಿದ್ದಾರೆ. ಶ್ರೀ ದೇವಿಪ್ರಸಾದ್ ಸಂಗೀತ ಸಂಯೋಜನೆ ಈ ಚಿತ್ರಕ್ಕಿದೆ.