ಕಾಗದ ಸಿನಿಮಾವನ್ನು ರಂಜಿತ್ ಕುಮಾರ್ ಗೌಡ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಅಂಕಿತಾ ಜಯರಾಮ್ ನಾಯಕಿಯಾಗಿ ಹಾಗೂ ಆದಿತ್ಯ ಕರೇಗೌಡ ನಾಯಕನಾಗಿ ನಟಿಸಿದ್ದಾರೆ. ನೇಹಾ ಪಾಟೀಲ್ ಅವರು ವಿಶೇಷ ಪಾತ್ರದಲ್ಲಿ ನಟಿಸಿದ್ದು, ಉಳಿದಂತೆ ಬಲ ರಾಜ್ವಾಡಿ, ಮಠ ಕೊಪ್ಪಳ, ನೀನಾಸಂ ಅಶ್ವತ್ಥ್, ಶಿವಮಂಜು ಹಲವರು ತಾರಾಗಣದಲ್ಲಿದ್ದಾರೆ.
ಇದೊಂದು ಪಕ್ಕಾ ಪ್ರೇಮಕಥೆಯಾಗಿದ್ದು, 2005ರ ಸಮಯದಲ್ಲಿ ನಡೆಯುವ ಕಾಲ್ಪನಿಕ ಕಥೆಯಾಗಿದೆ. ಮೊಬೈಲ್ ಇಲ್ಲದ ಕಾಲಘಟ್ಟದಲ್ಲಿ ಕಾಗದ ಎಷ್ಟು ಮುಖ್ಯ ಪಾತ್ರ ವಹಿಸಿದೆ ಅನ್ನೋದು ಈ ಚಿತ್ರದ ಕಥೆ. ಅರುಣ್ ಕುಮಾರ್ ಎ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಪ್ರದೀಪ್ ವರ್ಮಾ ಸಂಗೀತ ನಿರ್ದೇಶನ, ವೀನಸ್ ನಾಗರಾಜ್ ಮೂರ್ತಿ ಛಾಯಾಗ್ರಹಣ ಚಿತ್ರಕ್ಕಿದೆ.