ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 56ನೇ ಚಿತ್ರವಾದ 'ಕಾಟೇರ್ ಅನ್ನು ತರುಣ್ ಸುಧೀರ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಮಾಲಾಶ್ರೀ ಮತ್ತು ರಾಮು ಪುತ್ರಿ ಆರಾಧನಾ ಆರ್ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ಶ್ರುತಿ, ಬಿರಾದಾರ್, ಕುಮಾರ್ ಗೋವಿಂದ್, ಜಗಪತಿ ಬಾಬು, ಮಾಸ್ಟರ್ ರೋಹಿತ್ ಮುಂತಾದವರು ತಾರಾಗಣದಲ್ಲಿದ್ದಾರೆ.
ಚಿತ್ರಕ್ಕೆ ಚಿತ್ರಕ್ಕೆ ರಾಕಲೈನ್ ವೆಂಕಟೇಶ್ ಬಂಡವಾಳ ಹೂಡಿದ್ದಾರೆ. ರಾಕ್‌ಲೈನ್ ವೆಂಕಟೇಶ್ ನಿರ್ಮಾಣದ 'ಕಾಟೇರ' ಚಿತ್ರಕ್ಕೆ ವಿ. ಹರಿಕೃಷ್ಣ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಸುಧಾಕರ್ ಎಸ್ ರಾಜ್ ಛಾಯಾಗ್ರಹಣ ಹಾಗೂ ಕೆ ಎಂ ಪ್ರಕಾಶ್ ಸಂಕಲನ ಚಿತ್ರಕ್ಕಿದೆ. 70ರ ದಶಕದಲ್ಲಿ ನಡೆದ ಒಂದಷ್ಟು ನೈಜ ಘಟನೆಗಳನ್ನು ಆಧರಿಸಿ ಜಡೇಶ್ ಹಂಪಿ ಹಾಗೂ ತರುಣ್ ಸುಧೀರ್ 'ಕಾಟೇರ' ಚಿತ್ರಕ್ಕೆ ಕಥೆ ಸಿದ್ಧಪಡಿಸಿದ್ದು, ಮಾಸ್ತಿ ಸಂಭಾಷಣೆ ಚಿತ್ರಕ್ಕಿದೆ. ಮೋಷನ್ ಪೋಸ್ಟರ್‌ನಲ್ಲಿ 'ಪ್ರತಿ ಮಚ್ಚು ಎರಡು ದಪ ಕೆಂಪಾಗ್ತೈತೆ, ಬೆಂಕಿಲಿ ಬೆಂದಾಗ ರಕ್ತದಲ್ಲಿ ನೆಂದಾಗ' ಎನ್ನುವ ಡೈಲಾಗ್ ಅಭಿಮಾನಿಗಳಿಗೆ ಕಿಕ್ ಕೊಡ್ತಿದೆ.
ಟೈಟಲ್: ದರ್ಶನ್ ಅವರ ಹುಟ್ಟುಹಬ್ಬದ ಪ್ರಯುಕ್ತ 2023ರ ಫೆಬ್ರವರಿ 14ರಂದು ಅವರ 56ನೇ ಚಿತ್ರದ ಟೈಟಲ್ ಹಾಗೂ ಪೋಸ್ಟರ್ ರಿವೀಲ್ ಮಾಡಲಾಗಿದ್ದು, ಕಾಟೇರ ಎಂದು ಹೆಸರಿಡಲಾಗಿತ್ತು.
ಕಥೆ: 1989ರ ಸಮಯ. ಭೀಮನಹಳ್ಳಿ, ಮಲ್ಲನಹಳ್ಳಿ ಜನ ಊರ ಜಾತ್ರೆಗೆ ಸಿದ್ಧತೆ ನಡೆಸಿರುತ್ತಾರೆ. ತನ್ನ ಊರಿಗಾಗಿ ಹೋರಾಡಿ ಜೈಲು ಸೇರಿದ ಕಾಟೇರನಿಗೆ ಇಡೀ ಊರು ಕಾಯುತ್ತಿರುತ್ತದೆ. 10 ದಿನಗಳ ಕಾಲ ಪೆರೋಲ್ ಮೇಲೆ ಹೊರ ಬರುವ ಆತ ಊರಿನ ಹಾದಿ ಹಿಡಿಯುತ್ತಾನೆ. ಮತ್ತೊಂದು ಕಡೆ ನಾಲೆ ಅಗೆಯುವ ವೇಳೆ ಒಂದೇ ಜಾಗದಲ್ಲಿ 107ರ ಜನರ ಅಸ್ತಿಪಂಜರ ಸಿಕ್ಕಿರುತ್ತದೆ. ಅದು ಯಾರ ಅಸ್ಥಿಪಂಜರ? ಒಮ್ಮೆಲೆ ಅಷ್ಟು ಜನ ಸತ್ತು ಮಣ್ಣಾಗಿದ್ದೇಗೆ? ಅವರಿಗೂ ಕಾಟೇರನಿಗೂ ಏನು ಸಂಬಂಧ? 70ರ ದಶಕದಲ್ಲಿ ಆ ಎರಡೂ ಊರುಗಳಲ್ಲಿ ನಡೆದ ಘಟನೆಗಳೇನು? 'ಕಾಟೇರ' ಜೈಲು ಸೇರೋದ್ಯಾಕೆ? ಎಂಬುದೇ ಸಿನಿಮಾ ಕಥೆ.
ಬಿಡುಗಡೆ: ಬಹುನಿರೀಕ್ಷಿತ ಕಾಟೇರ ಸಿನಿಮಾ 2023ರ ಡಿಸೆಂಬರ್ 29ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು...