ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ 2022ರ ಸೆಪ್ಟೆಂಬರ್ 30ರಂದು ರಿಲೀಸ್ ಆಗಿ ಕನ್ನಡಿಗರ ಮನಗೆದ್ದಿತ್ತು. ಕನ್ನಡ ವರ್ಷನ್‌ನಿಂದಲೇ ವಿಶ್ವಾದ್ಯಂತ ಸಿನಿಪ್ರಿಯರ ಪ್ರೀತಿಯನ್ನು ಸಂಪಾದಿಸಿತ್ತು. ಈ ಮಧ್ಯೆ ಹೊರರಾಜ್ಯಗಳಿಂದಲೂ ಬೇಡಿಕೆ ಹೆಚ್ಚಾದ ಕಾರಣ ತೆಲುಗು, ತಮಿಳು, ಹಿಂದಿ ಮತ್ತು ಮಲಯಾಳಂ ಭಾಷೆಗೆ 'ಕಾಂತಾರ' ಚಿತ್ರವನ್ನು ಡಬ್ ಮಾಡಲಾಗಿತ್ತು. ಕಾಂತಾರ ಸಿನಿಮಾ ನೋಡಿ ಬಾಲಿವುಡ್ ಫಿಲ್ಮ್ ಮೇಕರ್ಸ್ ಕೂಡ ದಂಗಾಗಿದ್ದು, ಬಾಲಿವುಡ್ ಬಾಕ್ಸಾಫೀಸ್‌ನಲ್ಲಿ ಜಾದೂ ಮಾಡಿತ್ತು.
ಕಾಂತಾರ ಸಿನಿಮಾ ಯಶಸ್ಸಿನ ಬೆನ್ನಲೇ ರಿಷಬ್ ಶೆಟ್ಟಿ ಕಾಂತಾರ ಚಾಪ್ಟರ್ ೧ ಸಿನಿಮಾವನ್ನು ನಿರ್ದೇಶಿಸಿ, ನಟಿಸಿದ್ದಾರೆ. ಈ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಂಗದೂರ್ ನಿರ್ಮಾಣ ಮಾಡುತ್ತಿದ್ದು, ಬಿ ಅಜನೀಶ್ ಲೋಕೇಶ್ ಸಂಗೀತ ನೀಡುತ್ತಿದ್ದಾರೆ.
ಒಟಿಟಿ ಹಕ್ಕು: ಕಾಂತಾರ ಚಾಪ್ಟರ್ 1 ಸಿನಿಮಾದ ಒಟಿಟಿ ಹಕ್ಕನ್ನು ಅಮೆಜಾನ್ ಪ್ರೈಮ್ ಸಿನಿಮಾ ಬಿಡುಗಡೆಗೂ ಮುನ್ನವೇ ಖರೀದಿ ಮಾಡಿದೆ.
ಫಸ್ಟ್ ಲುಕ್: ಕಾಂತಾರ ಚಾಪ್ಟರ್ 1 ಟೀಸರ್ 2023ರ ನವೆಂಬರ್ 27ರಂದು ಬಿಡುಗಡೆ ಮಾಡಲಾಯಿತು. ಕಾಂತಾರ ಚಾಪ್ಟರ್ 1 ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಬಿಡುಗಡೆಯಾಗಲಿದೆ.