X
ಕಾಂತಾರ

ಕಾಂತಾರ

Action | 30 Sep 2022 | U/A | 150 Mins
Kannada

2.5 /5 Users

0 /5 Filmibeat

ಕಾಂತಾರ ಕಥೆ

ರಿಷಬ್ ಶೆಟ್ಟಿ ನಿರ್ದೇಶಿಸಿ ನಾಯಕನಾಗಿ ನಟಿಸುತ್ತಿರುವ ಕಾಂತಾರ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದುರ್ ನಿರ್ಮಿಸುತ್ತಿದ್ದಾರೆ. ಇದು ಹೊಂಬಾಳೆ ಪ್ರೊಡಕ್ಷನ್ಸ್ ನ 11ನೇ ಚಿತ್ರ. ಚಿತ್ರದಲ್ಲಿ ಕಿಶೋರ್, ಸಪ್ತಮಿ ಗೌಡ, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಕಥೆ:  ಕರಾವಳಿ ಪ್ರದೇಶವನ್ನು ಪರುಶುರಾಮನ ಸೃಷ್ಟಿ ಎಂದು ಹೇಳುತ್ತಾರೆ. ಕಾಡಿನ ಪಕ್ಕ ಒಂದು ಊರು. ಆ ಕಾಡನ್ನು ನಂಬಿ ಬದುಕುವ ಜನ. ಕಾಡಿನ ರಕ್ಷಣೆಗೆ ನಿಂತ ಅರಣ್ಯ ಇಲಾಖೆ ಅಧಿಕಾರಿ ಮುರಳಿಧರ ಪಾತ್ರದಲ್ಲಿ ಕಿಶೋರ್ ಅಬ್ಬರಿಸಿದ್ದಾರೆ. ಊರಿನ ಜನರ ಪರ ನಿಲ್ಲುವ ನಾಯಕ ಶಿವನಾಗಿ ರಿಷಬ್ ಶೆಟ್ಟಿ ಕಿಶೋರ್‌ಗೆ ಸವಾಲ್ ಹಾಕಿದ್ದಾರೆ. ಇವರಿಬ್ಬರ ನಡುವಿನ ಜಿದ್ದಾಜಿದ್ದಿನ ಹೋರಾಟದ ಕಥೆಯೇ 'ಕಾಂತಾರ'. 1847ರಲ್ಲಿ ಆರಂಭವಾಗುವ ಕತೆ ಚಿತ್ರ ಆರಂಭವಾದ ಹದಿನೈದು ನಿಮಿಷಗಳೊಳಗೆ 90ರ ದಶಕಕ್ಕೆ ಬಂದು ತಲುಪಿಬಿಡುತ್ತದೆ. ಟ್ರೈಲರ್‌ ನೋಡಿ ಈ ಚಿತ್ರ ಭೂತಕೋಲದ ಸುತ್ತ ನಡೆಯುವ ಕತೆ ಎಂದುಕೊಂಡರೆ ನಿಮ್ಮ ಊಹೆ ಸರಿ, ಕೇವಲ ಭೂತಕೋಲದ ಸುತ್ತ ಮಾತ್ರ ನಡೆಯುತ್ತೆ ಎಂದುಕೊಂಡರೆ ನಿಮ್ಮ ಊಹೆ ತಪ್ಪು. ಏಕೆಂದರೆ ಈ ಚಿತ್ರದಲ್ಲಿ ಭೂತಕೋಲ ಪ್ರಮುಖ ಅಂಶವಾಗಿದ್ದರೂ ಕತೆಯಲ್ಲಿ ಹೆಚ್ಚಾಗಿ ತೋರಿಸಿರುವುದು ಕಾಡುಬೆಟ್ಟು ಊರಿನ ಕುರಿತು, ಆ ಊರನ್ನು ಅರಣ್ಯ ಇಲಾಖೆಯಿಂದ ಉಳಿಸಿಕೊಳ್ಳಲು ಅವರು ನಡೆಸುವ ಹೋರಾಟದ ಕುರಿತು.  ರಿಷಬ್ ಶೆಟ್ಟಿ ಕಾಂತಾರ ಸಿನಿಮಾದ ಪ್ಲಸ್ ಪಾಯಿಂಟ್‌ಗಳು  ಬೆಳವಣಿಗೆ: ಕಾಂತಾರ ಸಿನಿಮಾ ಮೊದಲು ಕನ್ನಡ ಭಾಷೆಯಲ್ಲಿ ಮಾತ್ರ ಬಿಡುಗಡೆಯಾಗಿತ್ತು. ಈ ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಬಂದ ಹಿನ್ನೆಲೆಯಲ್ಲಿ ನಂತರ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆಯಾಯಿತು. ಕಾಂತಾರ ಚಿತ್ರಕ್ಕೆ ಬೇರೆ ಭಾಷೆಯ ಸಿನಿರಸಿಕರು ಫಿದಾ ಆದರು. ಈ ಸಿನಿಮಾವನ್ನು ನೋಡಿದ ವಿವಿಧ ಚಿತ್ರರಂಗದ ಸ್ಟಾರ್ ನಟರು ಕೂಡ ನಟ, ನಿರ್ದೇಶಕ ರಿಷಬ್ ಶೆಟ್ಟಿಯವರನ್ನು ಹಾಡಿ ಹೊಗಳಿದ್ದಾರೆ. ಕಾಂತಾರ ಸಿನಿಮಾದಿಂದ ರಿಷಬ್ ಶೆಟ್ಟಿ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ.
Read More

ಕಾಂತಾರ ಕಲಾವಿದರು ಮತ್ತು ಸಿಬ್ಬಂದಿ

ಕಾಂತಾರ ಕ್ರೂ ಮಾಹಿತಿ

ನಿರ್ದೇಶಕ ರಿ‍ಷಭ್ ಶೆಟ್ಟಿ
ಕಥೆ ರಿ‍ಷಭ್ ಶೆಟ್ಟಿ
ಸಿನಿಮಾಟೋಗ್ರಫಿ ಅರವಿಂದ ಕಶ್ಯಪ್
ಸಂಪಾದಕ ಕೆ.ಎಂ.ಪ್ರಕಾಶ್
ಸಂಗೀತ ಬಿ ಅಜನೀಶ್ ಲೋಕನಾಥ್
ನಿರ್ಮಾಪಕ ವಿಜಯ್ ಕಿರಗಂದುರ್
ಬಜೆಟ್ TBA
ಬಾಕ್ಸ್ ಆಫೀಸ್ TBA
ಒಟಿಟಿ ಪ್ಲಾಟ್ ಫಾರ್ಮ್ TBA
ಒಟಿಟಿ ರಿಲೀಸ್ ದಿನಾಂಕ TBA

ಕಾಂತಾರ ವಿಮರ್ಶಕರ ವಿಮರ್ಶೆ

ಕಾಂತಾರ
ಒಬ್ಬ ನಿರ್ದೇಶಕನಾಗಿ ಸಹ ಕಲಾವಿದರು, ತಂತ್ರಜ್ಞರನ್ನು ಹೇಗೆ ಬಳಸಿಕೊಳ್ಳಬಹುದು ಎನ್ನುವುದಕ್ಕೆ 'ಕಾಂತಾರ' ಚಿತ್ರ ಉದಾಹರಣೆಯಾಗಬಲ್ಲದು. ಒಂದೊಂದು ಪಾತ್ರವನ್ನೂ ರಿಷಬ್ ಕಟ್ಟಿಕೊಟ್ಟ ರೀತಿ ಯಾವ ಪರಿಯಿದೆ ಎನ್ನುವುದಕ್ಕೆ ಬಾಕ್ಸಾಫೀಸ್ ಕಲೆಕ್ಷನ್ ಈಗ ಉತ್ತರ ಕೊಡುತ್ತಿದೆ. ಯಾವುದೇ ಭಾಗದ ಸಿನಿಮಾ, ಸಂಪ್ರದಾಯವಿರಲಿ, ಚಿತ್ರದಲ್ಲಿ ಕಂಟೆಂಟ್, ಚಿತ್ರಕಥೆ ಇದ್ದರೆ ಕನ್ನಡಿಗರು ಕೈಬಿಡುವುದಿಲ್ಲ ಎನ್ನುವುದಕ್ಕೆ 'ಕಾಂತಾರ' ಮತ್ತೊಂದು ಪಟ್ಟಿ ಆಗಬಹುದು.

ಕಾಂತಾರ ಟ್ರೇಲರ್

Video Thumbnail

ಕಾಂತಾರ ಪಾಟ್ಲುಗಳು

ಕಾಂತಾರ ಸಿನಿಮಾ ನೋಡುಗರ ವಿಮರ್ಶೆ

  • ಕಥೆ
  • ಕ್ರಿಯೆ
  • ದಿಕ್ಕು
  • ಚಿತ್ರ ರೇಟಿಂಗ್

×
2.5 /5 Your Rating

ಕಾಂತಾರ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+