ಪುಟ್ಟಣ್ಣ ಕಣಗಾಲ್ ನಿರ್ದೇಶನದ ಕಥಾಸಂಗಮ ರಜನಿಕಾಂತ್ ಕನ್ನಡದಲ್ಲಿ ಅಭಿನಯಿಸಿದ ಮೊದಲ ಚಿತ್ರ ಮತ್ತು ಅವರ ಸಿನಿ ಬದುಕಿನ ಎರಡನೇ ಚಿತ್ರ. ಈ ಚಿತ್ರದಲ್ಲಿ ಪುಟ್ಟಣ್ಣನವರು ಒಂದು ಚಿತ್ರದಲ್ಲಿ ಮೂರು ಭಿನ್ನ ಉಪಕಥೆಗಳನ್ನು ಸೇರಿಸಿ ಚಿತ್ರ ಮಾಡಿದ್ದರು. ಭಾರತೀಯ ಚಿತ್ರರಂಗದಲ್ಲೇ ಇದೊಂದು ಅಭೂತಪೂರ್ವ ಪ್ರಯೋಗವಾಗಿತ್ತು. ಚಿತ್ರದಲ್ಲಿ ಕಲ್ಯಾಣ ಕುಮಾರ್, ಬಿ.ಸರೋಜಾದೇವಿ, ರಜಿನಿಕಾಂತ್, ಆರತಿ, ಗಂಗಾಧರ್ ಮತ್ತು ಲೀಲಾವಾತಿ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದರು.
ಈ ಚಿತ್ರ ಹಂಗು, ಅತಿಥಿ ಮತ್ತು ಮುನಿತಾಯಿ ಎಂಬು ಮೂರು ಕಥಾಸರಣಿ ಹೊಂದಿತ್ತು. ಚಿತ್ರದಲ್ಲಿ ರಜನಿಕಾಂತ್ ಮುನಿತಾಯಿ ಕಥಾಭಾಗದಲ್ಲಿ ನಟಿಸಿದ್ದರು.