ಬಿ.ಆರ್.ಪಂತಲು ನಿರ್ದೇಶನ ನಿರ್ಮಾಣದಲ್ಲಿ ಮೂಡಿಬಂದ ಈ ಚಿತ್ರದಲ್ಲಿ ಬಿ.ಸರೋಜಾದೇವಿ, ಡಾ.ರಾಜಕುಮಾರ್ ಮತ್ತು ಎಂ.ವಿ.ರಾಜಮ್ಮ ಮುಖ್ಯ ಪಾತ್ರದಲ್ಲಿ ನಟಿಸಿದ್ದರು. ಲೀಲಾವತಿ, ನರಸಿಂಹರಾಜು, ಬಾಲಕೃಷ್ಣ ಮುಂತಾದವರು ಮುಖ್ಯ ಪಾತ್ರದಲ್ಲಿ ನಟಿಸಿದ್ದರು.
ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ಕಾಯ್ದೆಯಡಿ ಬ್ರಿಟಿಷರು ಕಿತ್ತೂರು ಸಂಸ್ಥಾನವನ್ನು ವಶಪಡಿಸಿಕೊಳ್ಳಲು ಬಂದಾಗ ದಿಟ್ಟವಾಗಿ ಎದುರಿಸಿದ ರಾಣಿ ಚೆನ್ನಮ್ಮನ ಕಥೆಯನ್ನು ಚಿತ್ರ ಹೇಳುತ್ತದೆ. ಬಿ.ಸರೋಜಾದೇವಿ ಚೆನ್ನಮ್ಮನ ಪಾತ್ರದಲ್ಲಿ ಮಿಂಚಿದ್ದರು. ಈ ಚಿತ್ರ 9 ನೇ ರಾಷ್ಟ್ರ ಪ್ರಶಸ್ತಿ ಪಡೆಯಿತು.