ಅಗ್ನಿ ಶ್ರೀಧರ್ ಕಥೆ ಹಾಗೂ ಸಂಭಾಷಣೆ ಬರೆದಿರುವ
'ಕ್ರೀಂ' ಸಿನಿಮಾವನ್ನು ಅಭಿಷೇಕ್ ಬಸಂತ್ ನಿರ್ದೇಶನ ಮಾಡಿದ್ದಾರೆ. ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಸಂಯುಕ್ತಾ
ಹೆಗ್ಡೆ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ. ಕ್ರೀಂ ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿದೆ. ಉಳಿದಂತೆ ಚಿತ್ರದಲ್ಲಿ ಅರುಣ್ ಸಾಗರ್, ಅಚ್ಯುತ್ ಕುಮಾರ್ ಅಭಿನಯಿಸಿದ್ದಾರೆ.
ರೋಹಿತ್ ಸೋವರ್ ಸಂಗೀತ, ಸೋನದ್ ಛಾಯಾಗ್ರಹಣ ಚಿತ್ರಕ್ಕಿದೆ. ಡಿ.ಕೆ.ದೇವೇಂದ್ರ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಮಹಿಳೆ ಮತ್ತು ಮಕ್ಕಳ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನೇ ಕಥಾಹಂದವನ್ನಾಗಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ.
ಬಿಡುಗಡೆ: ಕ್ರೀಂ 2024ರ ಮಾರ್ಚ್ 1ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.