ಕುಲದಲ್ಲಿ ಕೀಳ್ಯಾವುದೋ ಸಿನಿಮಾವನ್ನು ಯೋಗರಾಜ್ ಭಟ್ ಜೊತೆ ಕೆಲಸ ಮಾಡಿ ಅನುಭವವಿರುವ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ 'ಕಾಮಿಡಿ ಕಿಲಾಡಿಗಳು' ಸೀಸನ್ 2 ವಿನ್ನರ್ ಮನು ಮಡೆನೂರ್ ನಾಯಕನಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಸೋನಾಲ್ ಮೊಂತೆರೊ ನಾಯಕಿಯಾಗಿ ನಟಿಸುತ್ತಿದ್ದು, ಉಳಿದಂತೆ ದಿಗಂತ್, ರಂಗಾಯಣ ರಘು, ಶರತ್ ಲೋಹಿತಾಶ್ವ, ಮೌನ ಗುಡ್ಡೆಮನೆ ಪ್ರಮುಖ ಪಾತ್ರಧಾರಿಗಳಾಗಿ ನಟಿಸುತ್ತಿದ್ದಾರೆ.
ಮನೋಮೂರ್ತಿ ಅವರ ಸಂಗೀತ ನಿರ್ದೇಶನ ಹಾಗೂ ನಿರಂಜನ್ ಬಾಬು ಅವರ ಛಾಯಾಗ್ರಹಣ ಈ ಚಿತ್ರಕ್ಕಿದೆ. ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ 'ಕುಲದಲ್ಲಿ ಕೀಳ್ಯಾವುದೋ' ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.