ಚಿಕ್ಕಣ್ಣ ನಾಯಕನಾಗಿ ನಟಿಸುತ್ತಿರುವ ಎರಡನೇ ಸಿನಿಮಾ ಲಕ್ಷ್ಮಿಪುತ್ರ. ಎ.ಪಿ ಅರ್ಜುನ್ ತಮ್ಮದೇ ನಿರ್ಮಾಣ ಸಂಸ್ಥೆ ಎಪಿ ಅರ್ಜುನ್ ಫಿಲಂಸ್ ಅಡಿಯಲ್ಲಿ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಅವರದ್ದೇ ಗರಡಿಯಲ್ಲಿ ಅಸೋಸಿಯೇಟ್ ಡೈರೆಕ್ಟರ್ ಆಗಿ ಕೆಲಸ ಮಾಡಿದ್ದ ವಿಜಯ್ ಎಸ್. ಸ್ವಾಮಿ ನಿರ್ದೇಶನ ಮಾಡುತ್ತಿದ್ದಾರೆ. ಸಚಿವ ಸಂತೋಷ್ ಲಾಡ್ ಲಕ್ಷ್ಮೀಪುತ್ರ ಚಿತ್ರವನ್ನು ಅರ್ಪಿಸುತ್ತಿದ್ದು, ಗಿರೀಶ್ ಆರ್ ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತವಿದೆ. ಡಾ.ಕೆ.ರವಿ ವರ್ಮಾ ಸಾಹಸ ನಿರ್ದೇಶನ ಮಾಡುತ್ತಿದ್ದಾರೆ. ಎಪಿ ಅರ್ಜುನ್, ಪ್ರಶಾಂತ್ ರಾಜಪ್ಪ ಹಾಗೂ ವಿಜಯ್ ಈಶ್ವರ್ ಸಂಭಾಷಣೆ ಬರೆದಿದ್ದರೆ, ರಾಜೇಶ್ ರಾವ್ ಸಹ ನಿರ್ದೇಶನ ಮಾಡುತ್ತಿದ್ದಾರೆ.