ಓಂ ಸಾಯಿ ಪ್ರಕಾಶ್ ನಿರ್ದೇಶನದಲ್ಲಿ ಮೂಡಿಬಂದ ಲಯನ್ ಜಗಪತಿ ರಾವ್
ಚಿತ್ರದಲ್ಲಿ ವಿಷ್ಣುವರ್ಧನ್ (ದ್ವಿಪಾತ್ರದಲ್ಲಿ), ಲಕ್ಷ್ಮಿ ಮತ್ತು ಭವ್ಯ ಮುಖ್ಯ ಪಾತ್ರದಲ್ಲಿ ನಟಿಸಿದರು. ಆರ್. ಎನ್.ಜಯಗೋಪಾಲ್ ಸಾಹಿತ್ಯದಲ್ಲಿ ಮೂಡಿಬಂದ ಗೀತೆಗಳಿಗೆ ಉಪೇಂದ್ರ ಕುಮಾರ್ ಸಂಗೀತ ನೀಡಿದರು.
ಈ ಚಿತ್ರದಲ್ಲಿ ವಿಷ್ಣು ಲಾಯರ್ ಮತ್ತು ಪೋಲಿಸ್ ಪಾತ್ರದಲ್ಲಿ ಮಿಂಚಿದರು. ಈ ಚಿತ್ರದ ನಟನೆಗಾಗಿ ಕರ್ನಾಟಕ ರಾಜ್ಯ ಅತ್ಯುತ್ತಮ ನಟ ಪ್ರಶಸ್ತಿ ಪಡೆದರು.