ಮಂಗಳವಾರಂ ಸಿನಿಮಾವನ್ನು ಅಜಯ್ ಭೂಪತಿ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಪಾಯಲ್ ರಜಪೂತ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿತ್ರದ ಪೋಸ್ಟರ್‌ನಲ್ಲಿ ಪಾಯಲ್ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾಗೆ ಕಾಂತಾರ ಮೂಲಕ ತೆಲುಗಿನಲ್ಲಿ ಜನಪ್ರಿಯವಾಗಿರುವ ಅಜನೀಶ್ ಬಿ ಲೋಕನಾಥ್ ಟ್ಯೂನ್ ಹಾಕುತ್ತಿದ್ದಾರೆ. ಮಂಗಳವಾರಂ ತೆಲುಗು, ತಮಿಳು, ಮಲಯಾಳಂ ಮತ್ತು ಕನ್ನಡ ಭಾಷೆಗಳಲ್ಲಿ ನಿರ್ಮಾಣ ಆಗುತ್ತಿದೆ.