ಮಾರ್ಗರೇಟ್ ಲವರ್ ಆಫ್ ರಾಮಾಚಾರಿ ಸಿನಿಮಾವನ್ನು ಗಿರಿಧರ್ ಕುಂಬಾರ್ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಯುವ ಪ್ರತಿಭೆ ಅಭಿಲಾಶ್ ನಾಯಕನಾಗಿ ಮತ್ತು ಸೋನಲ್ ಮೊಂಥೆರೋ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಅಭಿಲಾಶ್ ರಾಮಾಚಾರಿ ಅಲಿಯಾಸ್ ರಾಮು ಪಾತ್ರದಲ್ಲಿ ನಟಿಸುತ್ತಿದ್ದರೆ, ಸೋನಲ್ ಮೀರಾ ರಾಘವ್‌ರಾಮ್ ಅಲಿಯಾ್ ಮ್ಯಾಗಿ ಪಾತ್ರಕ್ಕೆ ಬಣ್ಣಹಚ್ಚಿದ್ದಾರೆ. ಯಶ್ ಶೆಟ್ಟಿ ಜಯಂತ್ ಅಲಿಯಾಸ್ ಜಲೀಲನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ ನಟ ರವಿಶಂಕರ್ ಹಾಗೂ ಅವಿನಾಶ್ ಈ ಚಿತ್ರದಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದ್ದಾರೆ.
ಕಥೆ: ಒಬ್ಬ ಸಾಮಾನ್ಯ ಹುಡುಗನಿಗೆ ಶ್ರೀಮಂತ ಹುಡುಗಿ ಸಿಕ್ಕಾಗ ಏನಾಗುತ್ತದೆ ಎಂಬುದೇ 'ಮಾರ್ಗರೇಟ್ ಲವರ್ ಆಫ್ ರಾಮಾಚಾರಿ' ಸಿನಿಮಾದ ಪ್ರಮುಖ ತಿರುಳು.