ಮೇರಿ ಸಿನಿಮಾವನ್ನು ಆನಾ ಖ್ಯಾತಿಯ ಮನೋಜ್ ಪಿ ನಡಲುಮನೆ ನಿರ್ದೇಶನ ಮಾಡಿದ್ದಾರೆ. ಚಇದೊಂದು ಥ್ರಿಲ್ಲರ್ ಡ್ರಾಮಾ ಕಥಾಹಂದರ ಹೊಂದಿದ್ದು, ಪಶ್ಚಿಮ ಘಟ್ಟದ ಗ್ರಾಮಾಂತರ ಠಾಣೆಯಲ್ಲಿ ನಡೆಯುವ ಕಥೆ ಒಳಗೊಂಡಿದೆ. ಇನಿಮಾದಲ್ಲಿ ವಿಕಾಸ್ ಉತ್ತಪ್ಪ, ಅನೂಷಾ ಕೃಷ್ಣ, ಚೇತನ್ ವಿಕ್ಕಿ, ತೇಜಸ್ವಿನಿ ಶರ್ಮಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
ಕಥೆ: ಚಿಕ್ಕಮಗಳೂರು ಜಿಲ್ಲೆಯ ಕಾಡು ಮಧ್ಯದಲ್ಲಿರುವ ಒಂದು ಗ್ರಾಮದ ಪೊಲೀಸ್ ಠಾಣೆಗೆ ಹೊಸದಾಗಿ ಅಪಾಯಿಂಟ್ ಆದ ಎಸ್ ಐ ಮುಂದೆ ಒಂದು ಹುಡುಗಿ ತನ್ನ ಮೇಲೆ ರೇಪ್ ಆಗುತ್ತೆ ಎಂದು ಹೇಳಿದಾಗ ಆ ದಿನ ಏನೇನು ಘಟನೆ ನಡೆಯುತ್ತೆ ಎಂಬುದು ಸಿನಿಮಾದ ಕಥೆ.
ಬಿಡುಗಡೆ: ಮೇರಿ ಸಿನಿಮಾ ಮಾರ್ಚ್ 10ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.