ಮಾರ್ಯಾದೇ ಪ್ರಶ್ನೆ ಸಿನಿಮಾವನ್ನು ನಾಗರಾಜ ಸೋಮಯಾಜಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಾಕೇಶ್ ಅಡಿಗ, ಸುನೀಲ್ ರಾವ್, ಶೈನ್ ಶೆಟ್ಟಿ, ಪ್ರಭು ಮಂಡಕೂರ್, ತೇಜು ಬೆಳವಾಡಿ, ಪೂರ್ಣಚಂದ್ರ ಮೈಸೂರು, ನಾಗೇಂದ್ರ ಶಾ ಮುಂತಾದವರು ನಟಿಸಿದ್ದಾರೆ. ಅರ್ಜುನ್ ರಾಮು ಸಂಗೀತ ಹಾಗೂ ಸಂದೀಪ್ ವೆಲ್ಲುರಿ ಛಾಯಾಗ್ರಹಣ ಸಿನಿಮಾಗಿದೆ. ಲೂಸ್ ಕನೆಕ್ಷನ್, ಹನಿಮೂನ್ ವೆಬ್ ಸೀರೀಸ್‌ಗಳನ್ನು ನಿರ್ಮಾಣ ಮಾಡಿರುವ ಆರ್‌ಜೆ ಪ್ರದೀಪ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ಮಾರ್ಯದೇ ಪ್ರಶ್ನೆ ಸಿನಿಮಾ 2024ರ ನವೆಂಬರ್ 22ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.