ಮ್ಯಾಟ್ನಿ (2024)(U/A)
Release date
05 Apr 2024
genre
ಮ್ಯಾಟ್ನಿ ಕಥೆ
ಮ್ಯಾಟ್ನಿ ಸಿನಿಮಾವನ್ನು ಮನೋಹರ್ ಕಾಂಪಲ್ಲಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಸತೀಶ್ ನೀನಾಸಂ ನಾಯಕನಾಗಿ ನಟಿಸಿದ್ದು, ರಚಿತಾ ರಾಮ್ ಹಾಗೂ ಅದಿತಿ ಪ್ರಭುದೇವ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ನಾಗಭೂಷಣ್ ಎನ್.ಎಸ್, ಶಿವರಾಜ್ ಕೆ. ಆರ್ ಪೇಟೆ, ಪೂರ್ಣಚಂದ್ರ ಮೈಸೂರು, ದಿಗಂತ್ ದಿವಾಕರ್ ಸೇರಿದಂತೆ ಹಲವರು ನಟಿಸಿದ್ದಾರೆ. ಎಸ್ ಪಾರ್ವತಿ ಈ ಸಿನಿಮಾಗೆ ಬಂಡವಾಳ ಹೂಡಿದ್ದು, ಪೂರ್ಣಚಂದ್ರ ತೇಜಸ್ವಿ ಅವರ ಸಂಗೀತ ಮತ್ತು ಕೆ.ಎಂ.ಪ್ರಕಾಶ್ ಸಂಕಲನವಿದೆ.
ಮ್ಯಾಟ್ನಿ ಸಿನಿಮಾ ಹಾಸ್ಯದಿಂದ ಆರಂಭವಾಗಿ, ಸೀರಿಯಸ್ ಆಗಿ, ನಂತರ ಭಾವನಾತ್ಮಕ ದೃಶ್ಯಗಳ ಮೂಲಕ ಕೊನೆಗೊಳ್ಳುತ್ತದೆ. ಇದೊಂದು ಹಾರರ್ ಕಾಮಿಡಿ ಸಿನಿಮಾವಾಗಿದೆ.
ಬಿಡುಗಡೆ: ಮ್ಯಾಟ್ನಿ ಸಿನಿಮಾ 2024ರ ಏಪ್ರಿಲ್ 5ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.
**Note:Hey! Would you like to share the story of the movie ಮ್ಯಾಟ್ನಿ with us? Please send it to us ([email protected]).