ಮೂಕ ಜೀವ ಕನ್ನಡ ಸಿನಿಮಾವನ್ನು ನಟ ಶ್ರೀನಾಥ್ ವಸಿಷ್ಠ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಹರ್ಷ ವೆಂಕಟೇಶ್, ಬಿಗ್‌ಬಾಸ್ ಕನ್ನಡ ಸೀಸನ್ 10ರ ವಿನ್ನರ್ ಕಾರ್ತಿಕ್ ಮಹೇಶ್, ಅಪೂರ್ವಶ್ರೀ, ಮೇಘಶ್ರೀ ಗೌಡ, ರಮೇಶ್ ಪಂಡಿತ್, ಗಿರೀಶ್ ವೈದ್ಯನಾಥ್ ಮುಂತಾದವರು ತಾರಾಗಣದಲ್ಲಿದ್ದಾರೆ. ವಿ ಮನೋಹರ್ ಸಂಗೀತ, ವಿ ಪವನ್ ಕುಮಾರ್ ಛಾಯಾಗ್ರಹಣ ಚಿತ್ರಕ್ಕಿದೆ. ಈ ಸಿನಿಮಾವನ್ನು ವೆಂಕಟೇಶ್ ಎಂ ಹಾಗೂ ಮಂಜುಳ ವೆಂಕಟೇಶ್ 'ಎವಿಎಂ ಎಂಟರ್‌ಟೈನರ್' ಬ್ಯಾನರ್ ಅಡಿಯಲ್ಲಿ ನಿರ್ಮಿಸಿದ್ದಾರೆ.
ಇದು ಜೆ.ಎಂ ಪ್ರಹ್ಲಾದ್ ಅವರ ಕಾದಂಬರಿ ಆಧಾರಿತ ಸಿನಿಮಾ. ಹಳ್ಳಿಯ ಬಡ ಕುಟುಂಬದಲ್ಲಿ ನಡೆಯುವ ಈ ಕಥೆ ಪಟ್ಟಣದಲ್ಲಿ ಅಂತ್ಯವಾಗುತ್ತದೆ. ಯಾವುದೇ ವ್ಯಕ್ತಿ ತಾನು ಸ್ವಾವಲಂಬಿಯಾಗಿ ಬದುಕಲು ಬೇಕಾದ ಸಹಾಯ, ಮಾರ್ಗದರ್ಶನ ಮತ್ತು ಸಹಾಯ ಪಡೆಯುವ ವ್ಯಕ್ತಿಯು ಸ್ಪಂದಿಸುವ ರೀತಿಯನ್ನು ಎಳೆಯಾಗಿ ತೆರೆದಿಡುವ ಪ್ರಯತ್ನವನ್ನು ಈ ಸಿನಿಮಾದಲ್ಲಿ ಮಾಡಲಾಗಿದೆ.