ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ಅಭಿನಯದ ಎರಡನೇ ಸಿನಿಮಾ ಮುಧೋಳ್. ಈ ಚಿತ್ರವನ್ನು ಕಾರ್ತಿಕ್ ರಾಜನ್ ನಿರ್ದೇಶನ ಮಾಡುತ್ತಿದ್ದು, ತಾಂಡವ ಸ್ಟುಡಿಯೋಸ್ ಬ್ಯಾನರ್ ಅಡಿಯಲ್ಲಿ ರಕ್ಷಾ ವಿ ಸಿಲ್ಜು ಕಣ್ಣನ್ ನಿರ್ಮಿಸುತ್ತಿದ್ದಾರೆ. ಈ ಸಿನಿಮಾದಲ್ಲಿ ಗ್ಯಾಂಗ್‌ಸ್ಟರ್ ಪಾತ್ರ ನಿರ್ವಹಿಸಲಿದ್ದಾರೆ. ಚಿತ್ರಕ್ಕೆ ಯುವರಾಜ್ ಚಂದ್ರನ್ ಸಂಗೀತ ನೀಡಿದ್ದು, ಟಗರು-ಸಲಗ ಖ್ಯಾತಿಯ ಮಾಸ್ತಿ ಸಂಭಾಷಣೆ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಡಾ.ಕೆ.ರವಿವರ್ಮಾ ಆಕ್ಷನ್ ಇದೆ. ಮುಧೋಳ್ ಸಿನಿಮಾದಲ್ಲಿ ಲವ್ ಮಾಕ್ಟೇಲ್ ಖ್ಯಾತಿಯ ಅಭಿಲಾಶ್, ರಘು ಮ್ಯೂಟಂಟ್ ಸೇರಿದಂತೆ ಹಲವರು ನಟಿಸಿದ್ದಾರೆ.