ನಗುವಿನ ಹೂಗಳ ಮೇಲೆ ಸಿನಿಮಾವನ್ನು ವೆಂಕಟ್ ಭಾರಧ್ವಾಜ್ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಗಟ್ಟಿಮೇಳ ಸೀರಿಯಲ್ ಖ್ಯಾತಿ ಅಭಿದಾಸ್ ನಾಯಕನಾಗಿ ಹಾಗೂ ಶರಣ್ಯ ಶೆಟ್ಟಿ ನಾಯಕಿಯಾಗಿ ಅಭಿನಯಿಸಿದ್ದಾರೆ. ಉಳಿದಂತೆ ಬಾಲಾ ರಾಜ್ವಾಡಿ, ಬೆನಕ ನಂಜಪ್ಪ, ಗಿರೀಶ್ ಬೆಟ್ಟಪ್ಪ, ಆಶಾ ಸುಜಯ್ ಮುಂತಾದವರು ತಾರಾಗಣದಲ್ಲಿದ್ದಾರೆ.
ಲವ್ ಪ್ರಾನ್ ಮೆಹತಾ ಸಂಗೀತಾ ನಿರ್ದೇಶನ, ಪ್ರಮೋದ್ ಭಾರತೀಯ ಛಾಯಾಗ್ರಹಣ ಹಾಗೂ ಚಂದನ್ ಪಿ ಸಂಕಲನ ಸಿನಿಮಾಗಿದೆ. ಟಾಲಿವುಡ್‌ನಲ್ಲಿ ಬೆಂಗಾಲ್ ಟೈಗರ್, ಪಂಥಂ, ಬಾಸ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ಕೆ. ಕೆ.ರಾಧಾ ಮೋಹನ್ ಶ್ರೀ ಸತ್ಯಸಾಯಿ ಆರ್ಟ್ಸ್ ಬ್ಯಾನರ್ ಅಡಿ 'ನಗುವಿನ ಹೂಗಳ ಮೇಲೆ' ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಬಿಡುಗಡೆ: ನಗುವಿನ ಹೂಗಳ ಮೇಲೆ ಸಿನಿಮಾ 2024ರ ಫೆಬ್ರವರಿ 9ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಯಿತು.