ನೈಜ ಘಟನೆ ಆಧಾರಿತ 'ಪಾದರಾಯ' ಸಿನಿಮಾಗೆ ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಏಕಕಾಲದಲ್ಲಿ ಕನ್ನಡ, ತಮಿಳು, ತೆಲುಗು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಖ್ಯಾತ ನಿರ್ಮಾಪಕ ಜಾಕ್ ಮಂಜು ನಿರ್ಮಾಣ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಮೈನಾ, ಸಂಜು ವೆಡ್ಸ್ ಗೀತಾ ಖ್ಯಾತಿಯ ನಿರ್ದೇಶಕ ನಾಗಶೇಖರ್ ನಾಯಕನಾಗಿ ನಟಿಸುತ್ತಿದ್ದಾರೆ.
ಪಾದರಾಯ ಎಂದರೆ ಹನುಮಂತ ಎಂದರ್ಥ. ಅಂಜನಾದ್ರಿ ಸುತ್ತಮುತ್ತ ನಡೆಯುವ ಕಥೆ ಚಿತ್ರದಲ್ಲಿದೆ. ೨೦೧೩-೧೪ರಲ್ಲಿ ನಡೆಯುವ ನೈಜ ಘಟನೆ ಆಧಾರಿತ ಸಿನಿಮಾ ಇದಾಗಿದೆ. ಈ ಘಟನೆ ಆರು ರಾಜ್ಯಗಳಿಗೆ ಸಂಬಂದಿಸಿದೆ. ಹೀಗಾಗಿ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆ ಮಾಡಲಾಗುತ್ತಿದೆ.