ಹರೀಶ್ ರಾಜ್ ನಿರ್ದೇಶಿಸಿ, ನಿರ್ಮಿಸಿ, ನಟಿಸಿರುವ ಸಿನಿಮಾ ಪ್ರೇತ. ಶಿರ್ಷಿಕೆಯೇ ಹೇಳುವಂತೆ ಇದೊಂದು ಹಾರರ್ ಸಿನಿಮಾ. ಚಿತ್ರಕ್ಕೆ ಸ್ವತಃ ಹರೀಶ್ ರಾಜ್ ಅವರೇ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಅಹಿರಾ ಶೆಟ್ಟಿ, ಅಮೂಲ್ಯ ಭಾರಧ್ವಾಜ್, ಬಿ ಎಂ ವೆಂಕಟೇಶ್, ಅಮಿತ್ ಸೇರಿದಂತೆ ಹಲವರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಪ್ರವೀಣ್ ಶ್ರೀನಿವಾಸ್ ಮೂರ್ತಿ ಸಂಗೀತ, ಶಿವಶಂಕರ್ ಛಾಯಾಗ್ರಹಣ ಚಿತ್ರಕ್ಕಿದ್ದು, ಹಾಡುಗಳಿಗೆ ಪ್ರಮೋದ್ ಮರವಂತೆ ಸಾಹಿತ್ಯ ಬರೆದಿದ್ದಾರೆ.
ಪ್ಯಾನ್ ಇಂಡಿಯಾ: ಪ್ರೇತ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು, ಕನ್ನಡ, ತೆಲುಗು, ಮಲಯಾಳಂ, ತಮಿಳು ಹಾಗೂ ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಯಿತು.