ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್ ಸಿನಿಮಾವನ್ನು ಎಂ.ಎನ್ ಶ್ರೀಕಾಂತ್ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಾಘವ್ ಎನ್ ರಮಣನಾಗಿ ಹಾಗೂ ಸಂಜನಾ ಬುರ್ಲಿ ರಾಧಾ ಆಗಿ ಮುಖ್ಯಪಾತ್ರ ನಿರ್ವಹಿಸಿದ್ದಾರೆ. ಉಳಿದಂತೆ ರೇಖಾ, ಗೋಪಿನಾಥ್ ಭಟ್, ಚಿರಾಗ್, ಪ್ರದೀಪ್ ತಿಪಟೂರು, ಗುರು ಹೆಗಡೆ, ಯಶಸ್ವಿ ಶಂಕರ್ ಮುಂತಾದವರು ನಟಿಸಿದ್ದಾರೆ. ಈ ಸಿನಿಮಾವನ್ನು ಸಾನ್ವಿ ಪಿಕ್ಚರ್ಸ್ ಲಾಂಛನದಲ್ಲಿ ಯಶಸ್ವಿ ಶಂಕರ್ ಮತ್ತು ಸವಿತಾ ಯಶಸ್ವಿ ನಿರ್ಮಾಣ ಮಾಡುತ್ತಿದ್ದಾರೆ. ನವನೀತ್ ಚರಿ ಸಂಗೀತ ನಿರ್ದೇಶನ ಮತ್ತು ವಿಶ್ವಜಿತ್ ರಾವ್ ಛಾಯಾಗ್ರಹಣ ಚಿತ್ರಕ್ಕಿದೆ.
ಕಥೆ: ರಾಧಾ-ರಮಣ ಇಬ್ಬರು ಒಬ್ಬರನ್ನೊಬ್ಬರು ಬಿಟ್ಟಿರಲಾದಂತಹ ಪ್ರೇಮಿಗಳು. ಕಾರಣಾಂತರಗಳಿಂದ ರಮಣ ತಪ್ಪಿಸಿಕೊಂಡಿರುತ್ತಾನೆ. ಅವನನ್ನು ರಾಧಾ ಹುಡುಕುವುದೇ ಚಿತ್ರ ಮುಖ್ಯ ಕಥಾಹಂದರ.
ಬಿಡುಗಡೆ: ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್ ಸಿನಿಮಾ ಜೂನ್ 2ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.