ರಾಜಯೋಗ ಸಿನಿಮಾವನ್ನು ಲಿಂಗರಾಜ್ ಉಚ್ಚಂಗಿ ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ಹಾಸ್ಯನಟ ಧರ್ಮಣ್ಣ ಕಡೂರು ಮೊದಲ ಬಾರಿ ನಾಯಕನಾಗಿ ನಟಿಸಿದ್ದಾರೆ. ನಾಯಕಿಯಾಗಿ ನೀರೀಕ್ಷಾ ರಾವ್ ಕಾಣಿಸಿಕೊಂಡಿದ್ದು, ಉಳಿದಂತೆ ನಾಗೇಂದ್ರ ಶಾ, ಅಪೂರ್ವ, ಉಷಾ ರವಿಶಂಕರ್, ಮಹಾಂತೇಶ್ ಹಿರೇಮಠ್ ತಾರಾಗಣದಲ್ಲಿದ್ದಾರೆ. ಅಕ್ಷಯ್ ರಿಷಭ್ ಸಂಗೀತ, ವಿಷ್ಣುಪ್ರಸಾದ್ ಛಾಯಾಗ್ರಹಣ ಚಿತ್ರಕ್ಕಿದೆ. ಈ ಸಿನಿಮಾವನ್ನು ಶ್ರೀರಾಮರತ್ನ ಪ್ರೊಡಕ್ಷನ್ಸ್ ಅಡಿ ಕುಮಾರ ಕಂಠೀರವ, ದೀಕ್ಷಿತ್ ಕೃಷ್ಣ, ಪ್ರಭು ಚಿಕ್ಕನಾಯ್ಕನಹಳ್ಳಿ, ಲಿಂಗರಾಜು ಕೆಎನ್, ಅರ್ಜುನ್ ಅಣತಿ ಜೊತೆಗೆ ಧರ್ಮಣ್ಣ ಸಹೋದರ ಹೊನ್ನಪ್ಪ ಕಡೂರು ನಿರ್ಮಾಣ ಮಾಡುತ್ತಿದ್ದಾರೆ.