ರಕ್ತ ಕಾಶ್ಮೀರ ಸಿನಿಮಾವನ್ನು ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶನ ಮಾಡಿದ್ದಾರೆ. ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಾಯಕನಾಗಿ ಹಾಗೂ ರಮ್ಯಾ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ದೊಡ್ಡಣ್ಣ, ಓಂ ಪ್ರಕಾಶ್ ರಾವ್, ತೆಲುಗು ನಟಿ ಅನಿಲ ಹಾಗೂ ಕುರಿ ಪ್ರತಾಪ್ ಸೇರಿದಂತೆ ಹಲವರು ತಾರಾಗಣದಲ್ಲಿದ್ದಾರೆ. ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದು, ಎಂ ಎಸ್ ರಮೇಶ್ ಅವರ ಸಂಭಾಷಣೆಯಿದೆ. MDM ಪ್ರೊಡಕ್ಷನ್ ರಕ್ತ ಕಾಶ್ಮೀರ ಸಿನಿಮಾವನ್ನು ಸಿನಿಮಾ ನಿರ್ಮಾಣ ಮಾಡಿದೆ.
ಭಯೋತ್ಪಾದನೆಯ ಹಿನ್ನೆಲೆಯನ್ನು ಇಟ್ಟುಕೊಂಡು ಎಸ್ ವಿ ರಾಜೇಂದ್ರ ಸಿಂಗ್ ಬಾಬು ಈ ಸಿನಿಮಾ ಕಥೆಯನ್ನು ಹೆಣೆದಿದ್ದರು. ಭಾರತದ ಗಡಿ ಭಾಗದಲ್ಲಷ್ಟೇ ಭಯೋತ್ಪಾದಕರು ಇಲ್ಲ. ಬೆಂಗಳೂರಿನಲ್ಲೂ ಉಗ್ರಗಾಮಿಗಳು ಇದ್ದಾರೆ ಅನ್ನೋದನ್ನು ಕಥೆಯಲ್ಲಿ ಹೇಳಲಾಗಿದೆ. ಅಲ್ಲದೆ ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಪ್ರಧಾನಿ ಮೋದಿಯ ಹೇಳಿಕೆಯನ್ನು ಇಲ್ಲಿ ಬಳಸಿಕೊಳ್ಳಲಾಗಿದೆ ಎನ್ನಲಾಗಿದೆ.
ಬಿಡುಗಡೆ: 17 ವರ್ಷಗಳ ಹಿಂದೆ ಚಿತ್ರೀಕರಣಗೊಂಡ ರಕ್ತ ಕಾಶ್ಮೀರ ಸಿನಿಮಾ 2025ರಲ್ಲಿ ಬಿಡುಗಡೆಯಾಗಲಿದೆ.