X
ರಾಮನ ಅವತಾರ
Comedy | Drama | 10 May 2024 | U | 136 Mins
Kannada

ರಾಮನ ಅವತಾರ ಕಥೆ

ರಾಮನ ಅವತಾರ ಸಿನಿಮಾವನ್ನು ವಿಕಾಸ್ ಪಂಪಾಪತಿ ನಿರ್ದೇಶನ ಮಾಡಿದ್ದಾರೆ. ಈ ಕಾಮಿಡಿ ಎಂಟರ್‌ಟೈನರ್ ಚಿತ್ರದಲ್ಲಿ ರಿಷಿ ಹಾಗೂ ಪ್ರಣೀತಾ ಸುಭಾಶ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದು, ಶುಭ್ರ ಅಯ್ಯಪ್ಪಅರುಣ್ ಸಾಗರ್, ಅನಿರುದ್ಧ್ ಆಚಾರ್ಯ ಮುಂತಾದವರು ತಾರಾಗಣದಲ್ಲಿದ್ದಾರೆ. ಸ್ಟಾರ್ ಫ್ಯಾಬ್ ಪ್ರೊಡಕ್ಷನ್ನಡಿ 'ಆಪರೇಷನ್ ಅಲಮೇಲಮ್ಮ' ಸಿನಿಮಾ ನಿರ್ಮಾಣ ಮಾಡಿದ್ದ ಅಮರೇಜ್ ಸೂರ್ಯವಂಶಿ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ರೊಮ್ಯಾಂಟಿಕ್ ಕಾಮಿಡಿ ಚಿತ್ರಕ್ಕೆ ವಿಷ್ಣುಪ್ರಸಾದ್ ಹಾಗೂ ಸಮೀರ್ ದೇಶ್ ಪಾಂಡೇ ಕ್ಯಾಮೆರಾ ಕೈಚಳಕವಿದ್ದು, ಜೂಡಾ ಸ್ಯಾಂಡಿ ಸಂಗೀತ, ಅಮರನಾಥ್ ಸಂಕಲನವಿದೆ. ಉಡುಪಿ, ಬೆಂಗಳೂರು ಸುತ್ತುಮುತ್ತ ಚಿತ್ರದ ಚಿತ್ರೀಕರಣ ನಡೆದಿದೆ.

ಕಥೆ: ಯಾವಾಗಲೂ ಜಾಲಿಯಾಗಿರುವ ರಾಮ ಕೃಷ್ಣ ಎಂಬ ಯುವಕನಿಗೆ ರಾಜಕಾರಣಿ ಆಗಬೇಕೆಂಬ ಆಸೆಯಿರುತ್ತದೆ. ಆದರೆ, ಅವನ ಜೀವನದಲ್ಲಾದ ಕೆಲ ಅನಿರೀಕ್ಷಿತ ಘಟನೆಗಳಿಂದ ಆತ ಏನೆಲ್ಲಾ ಸಮಸ್ಯೆಗಳಿಗೆ ಸಿಲುಕುತ್ತಾನೆ? ಅದರಿಂದ ಹೊರ ಬರುವುದು ಹೇಗೆ? ಅವನು ಹೇಗೆ ಜೆಂಟಲ್ ಮ್ಯಾನ್ ಆಗ್ತಾನೆ? ಎಂಬುದು ಸಿನಿಮಾ ಕಥೆ. 

ಬಿಡುಗಡೆ: ರಾಮನ ಅವತಾರ ಸಿನಿಮಾ 2024ರ ಮೇ 10ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಲಿದೆ. 

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+