ರಾಯರು ಬಂದರು ಮಾವನ ಮನೆಗೆ ಸಿನಿಮಾವನ್ನು ವಿಫುಲ್ ಶರ್ಮಾ ನಿರ್ದೇಶನ ಮಾಡಿದ್ದಾರೆ. ಇದೊಂದು ಗುಜರಾತಿ ಚಿತ್ರವಾಗಿದ್ದು, ಕನ್ನಡಕ್ಕೆ ಡಬ್ ಮಾಡಲಾಗಿದೆ. ಸಿನಿಮಾದಲ್ಲಿ ತುಷಾರ್ ಸಾಧು, ಕಿಂಜಲ್ ರಾಜಪ್ರಿಯ, ರಾಗಿ ಜಾನಿ, ಕಮಿನಿ ಪಾಂಚಾಲ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಪ್ರಶಾಂತ್ ಬರೋಟ್, ಜಯ ಪಾಂಡ್ಯ, ರಿಷಭ್ ಠಾಕೂರ್ ಮುಂತಾದವರು ಫೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಶೈಲೇಶ್ ಧಮೇಲಿಯಾ, ಅನಿಲ್ ಸಂಘವಿ, ಭರತ್ ಮಿಸ್ತ್ರಿ ಈ ಚಿತ್ರವನ್ನು ನಿರ್ಮಿಸಿದ್ದಾರೆ.
ಬಿಡುಗಡೆ: ರಾಯರು ಬಂದರು ಮಾವನ ಮನೆಗೆ ಚಿತ್ರ ಕೌಟುಂಬಿಕ ಕಥೆ ಹೊಂದಿದ್ದು, ಜುಲೈ 7ರಂದು ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ.