ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ ಬುಲೆಟ್
ಪ್ರಕಾಶ್ ರಕ್ಷಕ್ ನಾಯಕನಾಗಿ ನಟಿಸುತ್ತಿರುವ ಚೊಚ್ಚಲ ಸಿನಿಮಾ ಆರ್‌ಬಿ 01. ಈ ಸಿನಿಮಾವನ್ನು ಕ್ರಿಶ್ ನಿರ್ದೇಶನ ಮಾಡುತ್ತಿದ್ದಾರೆ. ಶ್ರೀಹರಿ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಶ್ರೀಧರ್ ಕಶ್ಯಪ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.
ಸಿನಿಮಾದ ಪೋಸ್ಟರ್‌ನಲ್ಲಿ ಲಾಂಗ್ ಹಾಗೂ ಗಣಪತಿ ವಿಸರ್ಜನೆ ದೃಶ್ಯವಿದೆ. ಜೊತೆಗೆ 'ಮಚ್ಚಾ ಏರಿಯಾದಲ್ಲಿ ಕಣ್ಮುಂದೆ ಬೇಜ್ಜಾನ್ ಗಾಡಿಗಳು ಸೌಂಡು ಮಾಡುತ್ತವೆ. ಆದರೆ, ಸೌಂಡ್ ಕೇಳ್ತಿದ್ದ ಹಾಗೆ ಇದೇ ಗಾಡಿ ಅಂತ ಹೇಳೋಕೆ ಆಗೋದು ಒಂದನ್ನೇ. ಅದುವೆ ಬುಲೆಟ್. ಇನ್ಮುಂದೆ ನಂದೇ ರೌಂಡು, ನಂದೇ ಸೌಂಡು' ಅಂತ ಬರೆಯಲಾಗಿದೆ.